ಬಳ್ಳಾರಿ : ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತರ ಮೇಲೆ ಪೋಲೀಸರು ಲಾಠ ಪ್ರಹಾರ ನಡೆಸಿದ್ದು, ಇದು ಅಕ್ಷಮ್ಯ ಅಪರಾಧ, ಕೂಡಲೇ ಈ ಘಟನೆಗೆ ಕಾರಣರಾದವರ ವಿರುಧ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಡಿಸಿ ಅವರ ಮೂಲಕ ಬುಧವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ರವಾನಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಎಂ.ಎಸ್.ಮಂಜುಳಾ ಅವರು ಮಾತನಾಡಿ, ಫ್ರೀಡಂ ಪಾರ್ಕ್ ಬಳಿ ಶಾಂತಿಯುತವಾಗಿ ಕಳೆದ ಜ.24ರಂದು ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಪೊಲೀಸರು ಲಾಠ ಪ್ರಹಾರ ನೀಡಿರುವುದು ಅತ್ಯಂತ ಖಂಡನೀಯ, ಕೂಡಲೇ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು, ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೋಬ್ಬರಿಗೂ ಪ್ರತಿಭಟಿಸುವ ಸ್ವಾತಂತ್ರ್ಯ ವಿದೆ, ನ್ಯಾಯಯುತವಾಗಿ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೇ, ಕಾರ್ಯಕರ್ತೆಯರನ್ನು ಸ್ಥಳದಿಂದ ಚದುರಿಸಲು ಪೊಲೀಸರು ಲಾಠ ಚಾರ್ಜ್ ಮಾಡಿದ್ದು, ಅತ್ಯಂತ ಖಂಡನೀಯ. ಕೆಲವರು ಪ್ರತಿಭಟಿಸುತ್ತಿದ್ದ ಮಹಿಳೆಯರ ಮಾಂಗಲ್ಯ ಸರವನ್ನು ಕಿತ್ತುಕೊಂಡಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಮಕ್ಕಳೊಂದಿಗೆ ಪ್ರತಿಭಟನೆಗೆ ಆಗಮಿಸಿದವರಿಗೆ ಸ್ವಲ್ಪವೂ ಮಾನವೀಯತೆ ತೋರದೇ ಪೊಲೀಸರು ಈ ತರಹ ದೌರ್ಜನ್ಯ ನಡಸಿರುವುದು ಸರಿಯಲ್ಲ, ಕೂಡಲೇ ರಾಜ್ಯ ಮಹಿಳಾ ಆಯೋಗದ ಅದ್ಯಕ್ಷರು ಮದ್ಯೆ ಪ್ರವೇಶಿಸಿ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸದೇ ವಿಫಲವಾಗಿರುವ ಸಂಬಂಧಿಸಿದ ಸಚಿವರು ಹಾಗೂ ಲಾಠಿ ಪ್ರಹಾರ ನಡೆಸಿದ ಪೊಲೀಸರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಂಟೊನ್ಮೆಂಟ್ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷೆ ಮಲ್ಲೇಶ್ವರಿ, ಅಲ್ಪಸಂಖ್ಯಾತ ಘಟಕದ ಶಮೀನಾ ಜಕ್ಲಿ, ಸುನಿತಾ, ರೋಹಿಣಿ, ಶ್ರೀಲತಾ, ಬಿ.ಬಿ.ಪಾತಿಮಾ, ಹಸೀನಾ,ಸುನಿತಾ, ಶ್ರೀಲತಾ ಸೇರಿದಂತೆ ಇತರರಿದ್ದರು. ಇದಕ್ಕೂ ಮುನ್ನ ಎಡಿಸಿ ಪಿ.ಎಸ್.ಮಂಜುನಾಥ್ ಅವರಿಗೆ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು.