ಕೂಡ್ಲಿಗಿ: ಪಟ್ಟಣದ ಪ್ರವಾಸ ಮಂದಿರದಲ್ಲಿ ಸೋಮವಾರ ನಡೆದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತವರಿ ಸಮಿತಿಗಳ ಸಮನ್ವಯ ವೇದಿಕೆಯ ವತಿಯಿಂದ ತಾಲೂಕಿನ ಎಲ್ಲಾ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರನ್ನು ಜಿಲ್ಲಾ ಎಸ್ಡಿಎಂಸಿ ಸಮನ್ವಯ ಸಮಿತಿ ಅಧ್ಯಕ್ಷರಾದ ಗುನ್ನಳ್ಳಿ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಗೆ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿ ತಮ್ಮ ತಮ್ಮ ಶಾಲೆಗಳ ಕುಂದು ಕೊರತೆಗಳನ್ನು ತಿಳಿಸಿದರು. ಇನ್ನು ಗುನ್ನಳ್ಳಿ ರಾಘವೇಂದ್ರ ಮಾತನಾಡಿ. ಎಸ್ಡಿಎಂಸಿ ಸಮಿತಿ ರಚನೆ ನಮ್ಮ ತಾಲೂಕಿನಲ್ಲಿ ಇನ್ನೂ ಅನೇಕ ಶಾಲೆಗಳು ರಚನೆ ಮಾಡಿಲ್ಲ. ಹಳ್ಳಿಗಳಲ್ಲಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಲ್ಲರೂ ಸೇರಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡುವಂತಹ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆ ಮಾಡಿ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸುವುದರ ಬಗ್ಗೆ ಯೋಚನೆ ಮಾಡಬೇಕು ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ಕೆಲಸ ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ರಾಮಸಾಗರ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ರಾಜಶೇಖರ್ ಜಿ.ಟಿ ಮಾತನಾಡಿ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಹೆಚ್ಚಾಗಿದೆ. ಈ ಹಾವಳಿಯನ್ನು ತಪ್ಪಿಸಬೇಕೆಂದರೆ ನಮ್ಮ ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳನ್ನು ನಾವು ಅಭಿವೃದ್ಧಿಪಡಿಸಬೇಕು ಶಾಲೆಯ ಅಧ್ಯಕ್ಷರಾಗಬೇಕೆಂದರೆ ಪುಣ್ಯದ ಕೆಲಸ ನಾವು ಮಕ್ಕಳಿಗೆ ಒಳ್ಳೆಯದನ್ನು ಮಾಡಿದರೆ ಮುಂದೊಂದು ದಿನ ಆ ಮಕ್ಕಳು ನಮ್ಮನ್ನು ನೆನಪಿಸಿಕೊಳ್ಳುತ್ತಾರೆ ಸರ್ಕಾರಿ ಶಾಲೆಯಲ್ಲಿ ಸಾಕಷ್ಟು ಸೌಲಭ್ಯಗಳು ಇವೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿದರೆ ಅಲ್ಲ ನಮ್ಮ ಹಳ್ಳಿಗಳಲ್ಲಿ ಜನರಿಗೆ ಹೇಳಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಸಬೇಕೆಂದು ತಿಳಿಸಿದರು ಇನ್ನು ಜಿಲ್ಲಾ ಎಸ್ಡಿಎಂಸಿ ಸಮನ್ವಯ ಸಮಿತಿ ಅಧ್ಯಕ್ಷರಾದ ಗುನ್ನಳ್ಳಿ ರಾಘವೇಂದ್ರ ತಾಲೂಕು ಎಸ್ಡಿಎಂಸಿ ಅಧ್ಯಕ್ಷೆ ಶ್ರೀಮತಿ ಭಾಗ್ಯ, ಶ್ರೀಕಂಠಪುರ ಎಸ್ಡಿಎಂಸಿ ಅಧ್ಯಕ್ಷರು ವೆಂಕಟೇಶ್, ಎಲ್ಲಾ ಸರ್ಕಾರಿ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹೂಡೇಂ