ಬಳ್ಳಾರಿ : ಸಿರುಗುಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ತೆಕ್ಕಲಕೋಟೆ ಪಟ್ಟಣದ ಕೆ.ಎಂ.ಚಂದ್ರಕಾಂತ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎನ್.ಎಲ್.ರಾಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನದಂತೆ “ದಲಿತ ಚಳುವಳಿಯ ಸಾಧನೆ ಮತ್ತು ವಿಫಲತೆಗಳು:ಒಂದು ಸಮಾಜಶಾಸ್ತ್ರೀಯ ಅಧ್ಯಯನ” (ವಿಶೇಷವಾಗಿ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ) ಎಂಬ ವಿಷಯದ ಸಂಶೋಧನಾ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.