9.2 C
New York
Wednesday, November 13, 2024

ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಬೀಜ, ಗೊಬ್ಬರ ವಿತರಣೆ

ಕೂಡ್ಲಿಗಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಮುಂಗಾರು ಹಂಗಾಮಿಗೆ ರೈತರಿಗೆ ಸರ್ಕಾರದ ರಿಯಾಯಿತಿ ದರದ ಬೀಜ, ಗೊಬ್ಬರ ಹಾಗೂ ಕೃಷಿ ಸಲಕರಣೆಗಳನ್ನು ರೈತರು ಪಡೆದುಕೊಂಡು ಉತ್ತಮ ಕೃಷಿ ಕೈಗೊಳ್ಳಬೇಕು. ಮುಂಗಾರು ಹಂಗಾಮಿಗೆ ಹೆಸರು, ತೊಗರಿ, ಜೋಳ, ಸೆಜ್ಜೆ, ಮೆಕ್ಕೆಜೋಳ ಬೀಜಗಳನ್ನು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಲಾಯಿತು. ಪ್ರಸಕ್ತ ಮುಂಗಾರಿಗೆ ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳ ಕೊರತೆ ಇಲ್ಲ. ರೈತರಿಗೆ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ಸಮಗ್ರ ತಯಾರಿ ಮಾಡಿಕೊಳ್ಳಲಾಗಿದೆ, ಬಿತ್ತನೆ ಬೀಜ ವಿತರಣೆ ಸಮಯದಲ್ಲಿ ಪ್ರತಿ ಪ್ಯಾಕೆಟ್ ಸ್ಕ್ಯಾನ್ ಮಾಡಲಾಗುತ್ತೆ ಜೊತೆಗೆ ಇತರೆ ದಾಖಲಾತಿ ನಮೂದಿಸಿದ ನಂತರವೇ ಬೀಜ ವಿತರಣೆ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ (ಪ್ರಭಾರಿ) ಸಾವಿತ್ರಿ ಹರಾಳು, ಗುರು ಬಸವರಾಜ ಚಿಲಗೋಡ ಸಹಾಯಕ ಕೃಷಿ ಅಧಿಕಾರಿ ಸೇರಿದಂತೆ ಸಿಬಂಧಿಗಳು, ರೈತರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles