ಬೀದರ್ : ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಸಚಿವ ಬಿ.ನಾಗೇಂದ್ರ ಅವರು ಬುಧವಾರ ಬೀದರ್ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾ ಕ್ರೀಡಾ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕ್ರೀಡಾ ಪಟುಗಳ ಜೊತೆ ಸಂವಾದ ನಡೆಸಿ ಇಲಾಖೆ ವತಿಯಿಂದ ನೀಡುತ್ತಿರುವ ತರಬೇತಿ ಹಾಗೂ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಕ್ರೀಡಾಪಟುಗಳೊಂದಿಗೆ ಮಾತನಾಡಿದ ಅವರು,ಕ್ರೀಡಾ ಇಲಾಖೆ ಕೊಡುವ ಸೌಲಭ್ಯಗಳನ್ನ ಬಳಸಿಕೊಂಡು ಉತ್ತಮ ಸಾಧನೆ ಮಾಡಿ ಒಳ್ಳೆಯ ಹೆಸರು ಗಳಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಯುಕ್ತರಾದ ಶಶಿ ಕುಮಾರ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರಾದ ಕಲ್ಲೇಶ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.