ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಳೆದ 2022-2023ನೇ ಸಾಲಿನ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಯೋ ಮೆಟ್ರಿಕ್ ಅಥೆಂಟಿಕೇಷನ್ ಮತ್ತು ಅರ್ಜಿಗಳನ್ನು ಪರಿಶೀಲನೆ ಮಾಡಲು ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಆಧಾರ್ ಕಾರ್ಡ್, ಖಾತೆ ಸಂಖ್ಯೆ ಅಪ್‍ಲೋಡ್ ಮಾಡಲು ಈ ಮೊದಲು ಆ.28 ಕೊನೆದಿನವಾಗಿದ್ದು, ಅದನ್ನು ಆ.31ರ ವರೆಗೆ ವಿಸ್ತರಿಸಲಾಗಿದೆ. ಬಯೋಮೆಟ್ರಿಕ್ ಅಥೆಂಟಿಕೇಷನ್ ಮಾಡಲು ಸಹ ಈ ಮೊದಲು ಆ.25 ಕೊನೆದಿನವಾಗಿದ್ದು, ಅದನ್ನು ಆ.29ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿದಾರರು ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಷನ್ ಮಾಡಲು ಆ.25 ಕೊನೆದಿನವಾಗಿದ್ದು, ಅದನ್ನು ಆ.31ರ ವರೆಗೆ ವಿಸ್ತರಿಸಲಾಗಿದೆ. ಇನ್ನು ಅರ್ಜಿಗಳನ್ನು ಪರಿಶೀಲನೆ ಮಾಡಲು ಐಎನ್‍ಒ, ಎಸ್‍ಎನ್‍ಒಗೆ ಆ.27, 31 ಕೊನೆಯದಿನವಾಗಿದ್ದು, ಇದೀಗ ಸೆ.6, ಸೆ.8ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಹಾಗೂ ದೂ.ಸಂ:ಬಳ್ಳಾರಿ-08392-245755 & 8310321101, ಸಿರುಗುಪ್ಪ-9148889975, ಸಂಡೂರು-9036925966 ಹಾಗೂ ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೆಲ್ಪ್‍ಲೈನ್ ನಂ:8277799990 (24/7) ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.