ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆಪ್ಟೆಂಬರ್ 01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸಂದರ್ಶನದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್‍ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.