9.2 C
New York
Wednesday, November 13, 2024

10 ದಿನಗಳ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ಅರ್ಜಿ ಆಹ್ವಾನ


ಬಳ್ಳಾರಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್ 3ನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ.
ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು ಮತ್ತು ಬರೆಯಲು ತಿಳಿದಿರಬೇಕು. ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ, ಇಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.7483538942, 9449226221 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles