ಬಳ್ಳಾರಿ : ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ-2013ರ ಸೆಕ್ಷನ್-11 ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.07 ರಂದು ಮಧ್ಯಾಹ್ನ 12 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು 2023-24ನೇ ಸಾಲಿನ ಆಗಸ್ಟ್-2023 ರ ಅಂತ್ಯದವರೆಗಿನ ಪ್ರಗತಿ ವರದಿಗಳೊಂದಿಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.