ಉಡುಪಿ : ಜಿಲ್ಲಾ ಸರ್ಕಾರಿ ಶಾಲೆಗಳ SDMC ಸಮನ್ವಯ ವೇದಿಕೆ ವತಿಯಿಂದ ಡಾ. ನಿರಂಜನರಾಧ್ಯ ಶಿಕ್ಷಣ ತಜ್ಞರು. ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲು ಉಸ್ತಾವರಿ ಸಮಿತಿಗಳ ಸಮನ್ವಯ ವೇದಿಕೆ ಮಹಾಪೋಷಕರು.ಕುಂದಾಪುರದಲ್ಲಿ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ಮಟ್ಟ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಪ್ರಧಾನ . ಗುರು ವಂದನ ಕಾರ್ಯಕ್ರಮ. ಶಿಕ್ಷಕರ ದಿನಾಚರಣೆ ಉಡುಪಿ ಜಿಲ್ಲಾಮಟ್ಟ ಅತ್ಯುತ್ತಮ ಸಮೂಹ ಸಂಪನ್ಮೂಲ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು
ಈ ಕಾರ್ಯಕ್ರಮ ತಾಲೂಕು ಕಾನೂನು ಸೇವಗಳಸಮತಿ ಕುಂದಾಪುರ. ಶಾಲಾ ಶಿಕ್ಷಕರ ಮತ್ತು ಸಾಕ್ಷರತಾ ಇಲಾಖೆ. ವಕೀಲರ ಸಂಘ ಬಾರ್ ಅಸೋಸಿಯೇಷನ್. ಕುಂದಾಪುರ ಗೀತಾ ಎಚ್ ಎಸ್.ಎನ್. ಫೌಂಡೇಶನ್ ಕೋಟೇಶ್ವರ. ಸರಸ್ವತಿ ಕಲ್ಯಾಣ ಮಂಟಪ. ಎಮ್ ಎನ್ ಮಂಜು ಚಾರಿಟೇಬಲ್ ಟ್ರಸ್ಟ್. ಚಿತ್ತೂರು.
ಈ ಕಾರ್ಯಕ್ರಮವನ್ನು ಶ್ರೀ ಅಬ್ದುಲ್ ರಹೀಮ್ ಹುಸೇನ್ ಶೇಕ್. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಉಡುಪಿ ಕಾರ್ಯಕ್ರಮದ ಮುಖ್ಯ ಅತಿಥಿಗಳು. ಶ್ರೀ ರಾಜು ಎನ್ ಹಿರಿಯ ಸಿವಿಲ್ ನ್ಯಾಯಾಧೀಶರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಅಧ್ಯಕ್ಷರು ತಾಲೂಕು ಕಾನೂನು ಸೇವಗಳ ಸಮಿತಿ ಕುಂದಾಪುರ. ಶ್ರೀಮತಿ ಶೃತಿ ಶ್ರೀ. ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್. ಸಿ ನ್ಯಾಯಾಧೀಶರು .
ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತಾವರಿ ಸಮಿತಿಗಳ ಸಮನ್ವಯ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಗುನ್ನಳ್ಳಿ ರಾಘವೇಂದ್ರ ಮತ್ತು ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು. SV ನಾಗರಾಜ್ ತಾಲೂಕು ಅಧ್ಯಕ್ಷರು. ಎಸ್ ಡಿ ಎಂ ಸಿ ಅಧ್ಯಕ್ಷರು ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಕುರಿತು ಶ್ರೀ ಅಬ್ದುಲ್ ರಹೀಮ್ ಹುಸೇನ್ ಶೇಕ್. ಜಿಲ್ಲಾ ನ್ಯಾಯಾಧೀಶರು ಮಾತನಾಡಿ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ನಾವೆಲ್ಲರೂ ಪ್ರಯತ್ನಿಸಬೇಕು ಸರ್ಕಾರದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ಮತ್ತು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಶಿಕ್ಷಕ ಎಂದು ಈ ಸಂದರ್ಭದಲ್ಲಿ ಪೋಷಕರಿಗೆ ನನ್ನದೊಂದು ಮನವಿ ಮಕ್ಕಳನ್ನು ಮೊಬೈಲ್ ಇಂದ ದೂರವಿಡಿ ಮಕ್ಕಳ ಕೈಯಲ್ಲಿ ಪುಸ್ತಕ ಕೊಡಿ ಸರ್ಕಾರಿ ಶಾಲೆಗಳನ್ನು ರಕ್ಷಣೆ ಮಾಡಿ ತಿಳಿಸಿದರು. ಶ್ರೀ ರಾಜು ಎನ್. ಹಿರಿಯ ನ್ಯಾಯಾಧೀಶರು ಮಾತನಾಡಿ
ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ನಿಯಮಗಳು ಇತ್ತೀಚಿನ ದಿನಗಳಲ್ಲಿ ಜಾರಿಯಾಗುತ್ತಿದ್ದಾವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸರ್ಕಾರದಿಂದ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸೌಲಭ್ಯಗಳು ಸಿಗುತ್ತವೆ. ನಾವೆಲ್ಲರೂ ಸರ್ಕಾರಿ ಶಾಲೆಗಳನ್ನು ರಕ್ಷಣೆ ಮಾಡಬೇಕು .ಶಿಕ್ಷಕರು ತಮ್ಮ ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದಲೇ ತಮ್ಮ ಶಿಷ್ಯರ ಮನಃ ಪಟಲದಲ್ಲಿ ಸದಾ ನಿಲ್ಲುತ್ತಾರೆ, ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಉತ್ತಮ ಶಿಕ್ಷಕರಿಂದಲೇ ಸಾಧ್ಯವಾಯಿತು ಎಂದು ಅವರು ತನ್ನ ಅನಿಸಿಕೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಶ್ವನಾಥ ಶೆಟ್ಟಿ ನಿವೃತ್ತ ಮುಖ್ಯ ಉಪಾಧ್ಯಾಯರು ಶ್ರೀ ಕೃಷ್ಣಮೂರ್ತಿ ಮಂಜರು. ಶ್ರೀ ಶಂಕರ್ ಭತಾ ಳರು ಮತ್ತು ನಾಗರಾಜ್ ಶೆಟ್ಟಿ ಬೈಂದೂರು ಶೈಕ್ಷಣಿಕ ವಲಯ. ಪರಿಮಳ. ಉಡುಪಿ ಶೈಕ್ಷಣಿಕ ವಲಯ. ಪ್ರಕಾಶ್ ಶೆಟ್ಟಿ.. ಆಶಾಲತಾ. ಬ್ರಹ್ಮಾವರ ಶೈಕ್ಷಣಿಕ ವಲಯ. ಪ್ರೀತೇ ಶ್ ಕುಮಾರ್ ಕಾರ್ಕಳ ಶೈಕ್ಷಣಿಕ ವಲಯ. ಈ ಎಲ್ಲಾ ಸಾಧಕರಿಗೆ ಪ್ರಸಸ್ತಿ ನೀಡಿ ಗೌರವಿಸಲಾಯಿತು
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತವರಿಗಳ ಸಮನ್ವಯ ವೇದಿಕೆ ರಾಜ್ಯದ ಎಲ್ಲಾ ಜಿಲ್ಲಾ ತಾಲೂಕು ಅಧ್ಯಕ್ಷರುಗಳು ರಾಜ್ಯ ಸಮಿತಿ ಸದಸ್ಯರು ಉಡುಪಿ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು ಎಸ್ ಡಿ ಎಂ ಸಿ ಅಧ್ಯಕ್ಷರು ಶಾಲಾ ಶಿಕ್ಷಕರು ಶಾಲಾ ಮಕ್ಕಳು ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು