ಬಳ್ಳಾರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ -2023ರ ಅಂಗವಾಗಿ ನಗರದ ಕಂಟೋನ್‍ಮೆಂಟ್‍ನ ಶಾಂತಿಧಾಮ ಆವರಣದಲ್ಲಿ ಶುಕ್ರವಾರದಂದು ಹಿರಿಯ ನಾಗರಿಕರಿಗಾಗಿ ಏರ್ಪಡಿಸಿದ್ದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಫರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾಮಾಜಿಕ ಅಭಿವೃದ್ದಿ ಪಥದಲ್ಲಿ ಎಲ್ಲರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಹೇಳಿದರು.
ಮಕ್ಕಳನ್ನು ಭೇದ ಭಾವ ಮಾಡದೇ ಎಲ್ಲಾರನ್ನು ಸಮಾನ ರೀತಿಯಲ್ಲಿ ಬೆಳೆಸಬೇಕು, ಇದರಿಂದ ಮಕ್ಕಳ ಮನಸಲ್ಲಿ ತಾರತ್ಯಮ್ಯ ಮಾಡುತ್ತಿದ್ದಾರೆ ಎಂಬ ಭಾವನೆ ಮೂಡುವುದಿಲ್ಲ ಎಂದು ಅಭಿಪ್ರಾಯ ಪಟ್ಟರು.
ವಾಸ್ತವದಲ್ಲಿ ವಿದ್ಯಾವಂತ ಯುವಕರಿಂದ ಹಿರಿಯ ನಾಗರಿಕರನ್ನು ಕಡೆಗಣಿಸುವುದನ್ನು ನಾವು ನೋಡುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದ ಅವರು, 2007 ಹಿರಿಯ ನಾಗರಿಕರ ಸನ್ನದ್ದು ಕಾಯ್ದೆಗಳ ಮೂಲಕ ದೌರ್ಜನ್ಯಕ್ಕೆ ಒಳಗಾದ ಹಿರಿಯ ನಾಗರಿಕರಿಗಾಗಿ ಕಾನೂನು ಸೇವೆ ಇದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಟಿ.ಮಲ್ಲೇಶ್ ಗೌಡ, ರಾಜ್ಯ ಪ್ರಶಸ್ತಿ ಪುರಸ್ಕøತೆ ಎನ್.ಡಿ.ವೆಂಕಮ್ಮ, ನಿವೃತ್ತ ಉಪನ್ಯಾಸಕ ಮಲ್ಲನಗೌಡ, ಅಧೀಕ್ಷಕರಾದ ನಂದಿನಿ, ಜೆ.ಸುವರ್ಣಲತಾ, ನಿವೃತ್ತಿ ಮುಖ್ಯಾಧಿಕಾರಿ ತಿಮ್ಮನಗೌಡ, ಮಹಿಳಾ ಸಂಘದ ಅಧ್ಯಕ್ಷೆ ಸುಮ ರೆಡ್ಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ, ಕೆ.ಹೆಚ್.ಗುರುಮೂರ್ತಿ, ಪಣಿರಾಜ್ ಸೇರಿದಂತೆ ವಿಶೇಷ ಚೇತನರು ಹಾಗೂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.