ಬಳ್ಳಾರಿ : ನಗರದ ರಾಘವೇಂದ್ರ ಕಾಲೋನಿಯ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ
ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ನಾರಾ ಭರತ್ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.