ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪ್ರವಾಸ ಮಂದಿರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸುಮತಿಯ ಕಾರ್ಯ ಚಟುವಟಿಕೆಗಳು ರಾಜ್ಯಾದ್ಯಂತ ವಿಸ್ತರಿಸಲು ಈಗಿನಿಂದಲೇ ಎಲ್ಲಾ ತಾಲೂಕುಗಳಲ್ಲಿ ಪದವೀಧರ ಮತದಾನ ನೋಂದಣಿ ಕಾರ್ಯ ಶುರು ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಸಮಿತಿ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ರೆಡ್ಡಿ ಕೂಡ್ಲಿಗಿ ಪ್ರವಾಸಿ ಮಂದಿರಕ್ಕೆ ಆಗಮಿಸಿದರು ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗುರುಸಿದ್ದನಗೌಡರು ಪಕ್ಷದ ಪದಾಧಿಕಾರಿಗಳು ಸ್ವಾಗತಿಸಿದರು. ಶಾಸಕ ಡಾ ಎನ್ ಟಿ ಶ್ರೀನಿವಾಸ್ ರವರನ್ನು ಶ್ರೀನಿವಾಸ್ ರೆಡ್ಡಿ ಅವರು ಶಾಲುಹೂವಿನ ಹಾರ ಹಾಕಿ ಸನ್ಮಾನಿಸಿದರು . ಉಮೇಶ್ ಮಾತನಾಡಿ ಕ್ಷೇತ್ರದಿಂದ ಕಳೆದ ಬಾರಿ ಗೆದ್ದ ಅಭ್ಯರ್ಥಿ ನಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ನಾವು ಸಾಕಷ್ಟು ಬಾರಿ ನಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವರಿಗೆ ತಿಳಿಸಿದರು
ಸಮೇತ ಯಾವ ವಿಷಯಕ್ಕೂ ನಮಗೆ ಸ್ಪಂದಿಸಿಲ್ಲ ನಮ್ಮ ಕ್ಷೇತ್ರದಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರ ಹುಡುಕುವಂತ ವ್ಯಕ್ತಿ ಆಗಬೇಕು ಕಾಂಗ್ರೆಸ್ ಪಕ್ಷದ ವತಿಯಿಂದ ಯಾಕೆ ಟಿಕೆಟ್ ತೆಗೆದುಕೊಂಡು ಬಂದರೆ ನಾವು ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು
ಶ್ರೀಮತಿ ನಾಗಮಣಿ ಜಿಂಕಲ್ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಮಾತನಾಡಿ. ನಾವು ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ದುಡಿದಿದ್ದೇವೆ ನಾವು ಕಾಂಗ್ರೆಸ್ ಪಕ್ಷಕ್ಕೆ ಯಾವತ್ತೂ ಮೋಸ ಮಾಡುವುದಿಲ್ಲ. ಕಳೆದ ಬಾರಿ ಕೂಡ ಪದವೀಧರ ಕ್ಷೇತ್ರದಿಂದ. ಸ್ಪರ್ಧೆ ಮಾಡಿರುವ ಅಭ್ಯರ್ಥಿ ನಮ್ಮ ಕ್ಷೇತ್ರದ ಕಡೆಗೆ ತಿರುಗಿ ನೋಡದಿದ್ದರೂ ಕೂಡ. ನಾವೇ ಪ್ರತಿ ಹಳ್ಳಿ ಹಳ್ಳಿಗೂ ಸಂಚಾರ ಮಾಡಿ. ಮತದಾನವನ್ನು ಮಾಡಿಸಿದ್ದೇವೆ ಅವರು ಗೆಲ್ಲುವುದಕ್ಕೆ ನಮ್ಮ ಕೂಡ್ಲಿಗಿ ಕ್ಷೇತ್ರದಿಂದ ನಾವು ಸಾಕಷ್ಟು ಕಷ್ಟ ಪಟ್ಟಿದ್ದೇವೆ. ಪದವೀಧರ ಕ್ಷೇತ್ರದಿಂದ ಗೆದ್ದ ನಂತರ ಇತ್ತ ಕಡೆ ಸುಳಿವೆ ಇಲ್ಲ. ನಮ್ಮ ಕಾಂಗ್ರೆಸ್ ಪಕ್ಷದಿಂದ ಯಾರೇ ಸ್ಪರ್ಧೆ ಮಾಡಿದರು ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು
ಕಾವಲಿ ಶಿವಪ್ಪ ನಾಯಕ ಪಟ್ಟಣ ಪಂಚಾಯತಿ ಸದಸ್ಯರು ಮಾತನಾಡಿ ನಮ್ಮ ಕ್ಷೇತ್ರದಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ದುಡಿದಿದ್ದೇವೆ. ಮುಂದೇನೂ ಕೂಡ ನಮ್ಮ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತೇವೆ. ಪದವೀಧರ ಕ್ಷೇತ್ರದಿಂದ ಗೆದ್ದಂತಹ ಅಭ್ಯರ್ಥಿಗಳು ನಮ್ಮ ಕ್ಷೇತ್ರದ ಕಡೆಗೆ ತಿರುಗಿ ನೋಡುವುದಿಲ್ಲ. ಪ್ರಚಾರಕ್ಕೂ ಕೂಡ ಬರುವುದಿಲ್ಲ. ಇಂಥ ವ್ಯಕ್ತಿಗಳು ನಮಗೆ ಬೇಕಿಲ್ಲ ನಮಗೆ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವಂತಹ ವ್ಯಕ್ತಿ ಆಗಬೇಕು ತಿಳಿಸಿದರು
ಶ್ರೀನಿವಾಸ ರೆಡ್ಡಿ ಮಾತನಾಡಿ ನಾನು ಕಳೆದ ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಕೇವಲ 160 ಮತಗಳಿಂದ ಸೋತಿದ್ದೇನೆ . ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು . ಬಳ್ಳಾರಿ ಕ್ಷೇತ್ರದಲ್ಲಿ ಸಚಿವ ನಾಗೇಂದ್ರಪ್ಪ. ಶಾಸಕ ನಾರಾ ಭರತ್ ರೆಡ್ಡಿ. ಶಾಸಕ ಗವಿಯಪ್ಪ ಪರವಾಗಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿ ಅವರ ಗೆಲುವುಗೆ ನಾವು ಸಾಕಷ್ಟು ಶ್ರಮಪಟ್ಟಿದ್ದೇವೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನನಗೆ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದೆ . ಮುಂಬರುವ ಚುನಾವಣೆಗಳಲ್ಲಿ ಕ್ಷೇತ್ರದಂತ ಸಂಚಾರ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತಾ. ಈಗಾಗಲೇ ಏಳು ಜಿಲ್ಲೆಗಳು 41 ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ನಾನು ನನ್ನ ಕಾರ್ಯ ಶುರು ಮಾಡಿದ್ದೇನೆ ನಾನು ಕಾಂಗ್ರೆಸ್ ಪಕ್ಷದಿಂದ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿ ಇದ್ದೇನೆ. ಖಂಡಿತವಾಗಿ ಈ ಕ್ಷೇತ್ರದ ಸಮಸ್ಯೆಗಳಿಗೆ ನಾನು ಕೂಡ ಕೈಗೂಡಿಸುತ್ತೇನೆ ಮಾಜಿ ಶಾಸಕರಾದ ಬೊಮ್ಮಣ್ಣನವರು ಕೂಡ ನಮಗೆ ತುಂಬಾ ಆತ್ಮೀಯರು. ಈಗ ಅವರ ಮಗನಾದ ಡಾ ಎನ್ ಟಿ ಶ್ರೀನಿವಾಸ್ ಅವರು ಶಾಸಕರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಾಕಷ್ಟು ಕನಸನ್ನು ಕಟ್ಟಿಕೊಂಡಿದ್ದಾರೆ ಈ ಕ್ಷೇತ್ರದ ಅಭಿವೃದ್ಧಿ ಮಾಡುವುದು ಯಾವಾಗಲೂ ಅವರ ಜೊತೆಗೆ ನಿಲ್ಲುತ್ತೇನೆ ಎಂದು ತಿಳಿಸಿದರು
ಡಾ.ಎನ್ ಟಿ ಶ್ರೀನಿವಾಸ್ ಕೂಡ್ಲಿಗಿ ಕ್ಷೇತ್ರದ ಶಾಸಕರು ಮಾತನಾಡಿ ಕೂಡ್ಲಿಗಿ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು. ಈ ಕ್ಷೇತ್ರದಲ್ಲಿ ಸಾಕಷ್ಟು ಬಡತನ ಕಾಡುತ್ತದೆ ಈ ಕ್ಷೇತ್ರ ಅಭಿವೃದ್ಧಿ ಮಾಡುವುದು ನನ್ನ ಉದ್ದೇಶ. ಕಾಂಗ್ರೆಸ್ ಪಕ್ಷದ ವತಿಯಿಂದ ಪದವೀಧರ ಕ್ಷೇತ್ರದ ಆಕಾಂಕ್ಷಿಗಳಲ್ಲಿ ಯಾರೇ ಟಿಕೆಟ್ ತೆಗೆದು ಕೊಂಡು ಬಂದರು ನಾವು ಅವರ ಜೊತೆಗೆ ಕೆಲಸ ಮಾಡುತ್ತೇವೆ
ನಮ್ಮ ಕಾಂಗ್ರೆಸ್ ಪಕ್ಷದಿಂದ ಪದವೀಧರ ಕ್ಷೇತ್ರದಿಂದ ಯಾರೇ ಗೆದ್ದರೂ ಈ ಕ್ಷೇತ್ರದ ಅಭಿವೃದ್ಧಿ ಕಡೆಗೆ ಒತ್ತು ಕೊಡಬೇಕೆಂದು ತಿಳಿಸಿದರು ಪಕ್ಷದ ಎಲ್ಲಾ ಪದಾಧಿಕಾರಿಗಳು ಮುಖಂಡರಿಗೆ ನಾನು ಹೇಳುವುದು ಒಂದೇ
ನಾನು ವೈದ್ಯನಾಗಿರುವುದರಿಂದ ರಾಜಕೀಯ ಕ್ಷೇತ್ರ ನನಗೆ ಹೊಸದು ಎಂದೂ ಶಾಸಕರು ತಿಳಿಸಿದರು. ಬಹುಮುಖ್ಯ ಸಮಸ್ಯೆಗಳಿಗೆ ಮೊದಲ ಆಧ್ಯತೆ ಕೊಡಬೇಕಾಗಿದೆ. ಕ್ಷೇತ್ರದಲ್ಲಿ ಬರಗಾಲ ಆವರಿಸಿರುವುದರಿಂದ ಗಮನಕೊಟ್ಟು ಕೆಲಸ ಮಾಡಬೇಕಾಗಿದೆ. ಸಭೆಗಳಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ. ಎಲ್ಲವನ್ನೂ ಅರ್ಥ ಮಾಡಿಕೊಳ್ಳುವೆ . ಮುಂದಿನ ದಿನಗಳಲ್ಲಿ ನಿಮ್ಮ ಜೊತೆಗೂಡಿ ಪಕ್ಷ ಸಂಘಟನೆಗೆ ಮುತ್ತು ಕೊಡುತ್ತೇನೆ ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಎನ್ ಟಿ ಶ್ರೀನಿವಾಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುರುಸಿದ್ದನಗೌಡ. ಶ್ರೀಮತಿ ನಾಗಮಣಿ ಜಿಂಕಲ್ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ. ಕಾವಲಿ ಶಿವಪ್ಪ ನಾಯಕ ಪಟ್ಟಣ ಪಂಚಾಯಿತಿ ಸದಸ್ಯರು ಉಮೇಶ್. ಸಿದ್ದೇಶ್. ದುರ್ಗೇಶ್. ಹೋಗು ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಕಾಂಗ್ರೆಸ್ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು