9.2 C
New York
Wednesday, November 13, 2024

ಹಿಂದುಳಿದ ವರ್ಗಗಳ ವಸತಿ ರಹಿತರಿಗೆ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪ್ರವರ್ಗ-1 ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಂದ ಪಡೆದು ಭರ್ತಿ ಮಾಡಿ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅ.16ರೊಳಗಾಗಿ ಸಲ್ಲಿಸಬೇಕು.
ನಿಬಂಧನೆಗಳು: ವಸತಿ ಸೌಲಭ್ಯದ ಫಲಾನುಭವಿಗಳು ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರೆಂದು ಗುರುತಿಸಲ್ಪಟ್ಟಿರಬೇಕು. ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಎಲ್ಲಾ ಜಾತಿಗಳಿಗೂ ಪ್ರಾತಿನಿಧ್ಯತೆಯನ್ನು ನೀಡಲಾಗುವುದು. ಅರ್ಜಿದಾರರು ಇತರೆ ಯಾವುದೇ ಯೋಜನೆ/ಇಲಾಖೆ/ನಿಗಮಗಳಿಂದ ವಸತಿ ಸೌಲಭ್ಯವನ್ನು ಪಡೆದಿರಕೂಡದು. ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಕುಟುಂಬದವರ ಹೆಸರಿನಲ್ಲಿ ನೊಂದಣಿಯಾಗಿರಬೇಕು. ಕನಿಷ್ಠ 20 ವರ್ಷಗಳವರೆಗೆ ನಿವೇಶನವನ್ನು ಪರಬಾರೆ ಮಾಡತಕ್ಕದ್ದಲ್ಲ. ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.2ಲಕ್ಷಗಳ ಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರ ಡಿ.ದೇವರಾಜು ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751ಗೆ ಸಂಪರ್ಕಿಸಬಹುಸು ಎಂದು ಸುರೇಶ್‍ಬಾಬು ಅವರು ತಿಳಿಸಿದ್ದಾರೆ,

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles