ಬಳ್ಳಾರಿ : ಜಿಲ್ಲೆಯಲ್ಲಿ ಬಹಳಷ್ಟು ಸಣ್ಣ ಉದ್ದಿಮೆಯ ಅಂಗಡಿ, ಹೋಟೆಲ್ ಮತ್ತು ವಾಣಿಜ್ಯ ಮಳಿಗೆಗಳು ಟ್ರೇಡ್ ಲೈಸನ್ಸ್ ಪಡೆಯದೆ ನೋಂದಣಿಯಾಗದೆ ಇದ್ದಲ್ಲಿ ಅಂತಹ ಕಡೆಗೆ ಭೇಟಿ ನೀಡಿ, ಪರಿಶೀಲಿಸಿ ನೋಂದಣಿ ಕಾರ್ಯ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಎಸ್.ಲಾಡ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಬಳ್ಳಾರಿ ಹಾಗೂ ವಿಜಯನಗರ ಕಾರ್ಮಿಕರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳು, ಕಾರ್ಮಿಕ ಇಲಾಖಾ ಕೋರ್ಟ್ ಪ್ರಕರಣಗಳ ಇತ್ಯರ್ಥ ಹಾಗೂ ಕರ ಸಂಗ್ರಹದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್‍ಗಳನ್ನು ಪಡೆದು ಫಲಾನುಭವಿಗಳಿಗೆ ಕಾರ್ಮಿಕ ಕಾರ್ಡ್‍ನ್ನು ನೋಂದಾಯಿತರಾಗಿ ರದ್ದುಗೊಳಿಸಬೇಕು ಎಂದರು.
ಜನರು ಕಾರ್ಮಿಕರ ಇಲಾಖೆಯ ಮೇಲೆ ಅಪಾರವಾದ ನಂಬಿಕೆ ಇಟ್ಟು ಕೊಂಡಿದ್ದಾರೆ. ಅವರ ನಂಬಿಕೆಗೆ ‘ಕ್ಕೆಯಾಗದಂತೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ನೋಂದಣಿ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ, ಹೆರಿಗೆ ಸಹಾಯ ಧನ, ಮದುವೆ ಸಹಾಯಧನ ಸೇರಿದಂತೆ ವಿವಿಧ ಅರ್ಜಿಗಳನ್ನು ತಕ್ಷಣ ವಿಲೇವಾರಿಗೊಳಿದೆವೆ ಎಂದು ಅಧಿಕಾರಿ ಹೇಳಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು.
ಬಾಲಕಾರ್ಮಿಕರ ರಕ್ಷಣೆಗೆ ಟಾಸ್‍ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ತಕ್ಷಣ ಮಕ್ಕಳ ರಕ್ಷಣಾ ಕಾರ್ಯ ಕೈಗೊಳಬೇಕು ಎಂದರು. ಈ ಸಭೆಯಲ್ಲಿ ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಕಾರ್ಮಿಕ ಆಯುಕ್ತರಾದ ಗೋಪಾಲ ಕೃಷ್ಣ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಸಿಇಒ ಮತ್ತು ಕಾರ್ಯದರ್ಶಿ ಭಾರತಿ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ವರದ್‍ರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.