ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕು ಮಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ. ಎನ್ ಟಿ ಶ್ರೀನಿವಾಸ್ ರವರು ಕೂಡ್ಲಿಗಿ ಪಟ್ಟಣದಲ್ಲಿ ತಹಾ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಲ್ಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಕುರಿತು ಶಾಸಕರು ಮಾತನಾಡಿದರು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಕಲೋತ್ಸವ ಕಾರ್ಯಕ್ರಮಗಳು ಪೂರಕವಾಗಿವೆ .
ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ರೀತಿಯ ವಿಭಿನ್ನ ಪ್ರತಿಭೆಗಳು ಇರುತ್ತವೆ. ಇಂತಹ ಪ್ರತಿಭೆಗಳನ್ನು ಶಿಕ್ಷಕರು ಹಾಗೂ ಪಾಲಕರು ಗುರುತಿಸಿ ಸೂಕ್ತ ವೇದಿಕೆ ನಿರ್ಮಿಸಿಕೊಟ್ಟರೆ ಅವರು ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ
ಕರ್ನಾಟಕದಲ್ಲಿ ಕೂಡ್ಲಿಗಿ ತಾಲೂಕು ಹಿಂದುಳಿದ ಪ್ರದೇಶ ಪ್ರದೇಶ ಅಭಿವೃದ್ಧಿಯಿಂದ ವಂಚಿತವಾಗಿದೆ. ಬಹುತೇಕ ಜನರು ಕಷ್ಟದಲ್ಲಿ ಇದ್ದಾರೆ. ಶಿಕ್ಷಣ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸಬೇಕಾಗಿದೆ. ಹೀಗಾಗಿ ಕೂಡ್ಲಿಗಿ ಮತ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡುತ್ತೇನೆ ಎಂದೂ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪದ್ಮನಾಭ ಕರ್ಣಂ ಮಾತಾನಾಡಿದ ಅವರು ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪ್ರತಿಭಾ ಕಾರಂಜಿ ಕಲೋತ್ಸವದಂತಹ ಕಾರ್ಯಕ್ರಮದಿಂದ ಮಕ್ಕಳ ಬೌದ್ಧಿಕ ಮಟ್ಟ ಬೆಳವಣಿಗೆ ತುಂಬಾ ಸಹಕಾರಿಯಾಗುತ್ತದೆ ಎಂದರ ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಎನ್ ಟಿ. ಶ್ರೀನಿವಾಸ್. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪದ್ಮನಾಭ ಕರ್ಣಂ. ಶಿಕ್ಷಣ ಇಲಾಖೆ ಅಧಿಕಾರಿಗಳು ಶಿಕ್ಷಕರು ಮತ್ತು ರಾಜಕೀಯ ಮುಖಂಡರು ಪೋಷಕರು ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು