9.2 C
New York
Wednesday, November 13, 2024

ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ : ಬಿ.ಉಮಾದೇವಿ

ಬಳ್ಳಾರಿ : ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಪ್ರದೇಶದಲ್ಲಿರುವ ಸಂತಜಾನ್ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ 2023-24ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ಮಕ್ಕಳಲ್ಲಿ ಒಂದೊಂದು ಶಕ್ತಿ(ಪ್ರತಿಭೆ) ಅಡಗಿದ್ದು, ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಅವರು ಸಲಹೆ ನೀಡಿದರು. ಶಾಲಾ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುವ ಕೆಲಸವನ್ನು ಶಿಕ್ಷಕರು ಮಾಡಬೇಕು.

ಪಾಠದ ಜತೆಗೆ ಕಲೆ ಮತ್ತು ಸಂಸ್ಕøತಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ಮಾಡಬೇಕು ಎಂದರು.
ನಮ್ಮ ಜಿಲ್ಲೆಯ ಹೆಚ್ಚಿನ ಮಕ್ಕಳು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಿಂಚಿ, ಹೆಚ್ಚಿನ ಪ್ರಶಸ್ತಿಗಳನ್ನು ತರುವುದರ ಮೂಲಕ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ನಿಯೋಜಿತರಾದ ತೀರ್ಪುಗಾರರರು ಅತ್ಯಂತ ನಿಷ್ಪಕ್ಷಪಾತವಾಗಿ ಪ್ರತಿಭಾವಂತರನ್ನು ಆಯ್ಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ನೋಡೆಲ್ ಅಧಿಕಾರಿ ವಿರೇಶಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾಕಾರಂಜಿಯ ಧ್ಯೇಯೊದ್ದೇಶಗಳನ್ನು ವಿವರಿಸಿದರು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆಯ್ಕೆಯಾದ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 2022-23ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಸಪ್ರಶ್ನೆ ವಿಭಾಗ, ಜಾನಪದ ನೃತ್ಯ ವಿಭಾಗ, ರಂಗೋಲಿ ಸ್ಪರ್ಧೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಬುದ್ಧನ ವೇಷದಲ್ಲಿ ಕಂಡುಬಂದ ಮಹಾನಂದಿ ಕೊಟ್ಟಂ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿ

ರಸಪ್ರಶ್ನೆ ಸ್ಪರ್ಧೆ ವಿಭಾಗ: ಮಾರೆಮ್ಮ, ಎಸ್ ಇ ಎಸ್ ಶಾಲೆ, ಸಂಡೂರು.
ಜಾನಪದ ನೃತ್ಯ ವಿಭಾಗ: ಬಳ್ಳಾರಿ ಬೆಸ್ಟ್ ಶಾಲೆಯ ವಿದ್ಯಾರ್ಥಿಗಳು.
ರಂಗೋಲಿ ಸ್ಪರ್ಧೆ: ಸಿರುಗುಪ್ಪ ತಾಲ್ಲೂಕಿನ ಹಚ್ಚೊಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ. ಈ ಸಂದರ್ಭದಲ್ಲಿ ಸಂತ ಜಾನರ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪತ್ರ ವ್ಯವಹಾರಾಧಿಕಾರಿಗಳಾದ ವಂದನೀಯ ಫಾದರ್ ವಾಲ್ಟೇರ್ ಮೆನೆಜೆಸ್, ಸಂತಜಾನರ ಪ್ರೌಢಶಾಲೆಯ ಮುಖ್ಯಗುರುಗಳಾದ ಶಾಂತುಶೀಲನ್ ಸೇರಿದಂತೆ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರು, ವಿಷಯ ಪರಿವೀಕ್ಷಕರು ಸೇರಿದಂತೆ ಜಿಲ್ಲಾ ಹಾಗೂ ಮಟ್ಟದ ಸರ್ಕಾರಿ, ಅನುದಾನ ರಹಿತ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿರದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles