ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎರಡು ದಿನಗಳ “ಮಿನಿ ಉದ್ಯೋಗಮೇಳ”ವನ್ನು ಜ.05 ಮತ್ತು 06 ರಂದು ಬೆಳಿಗ್ಗೆ 10 ಗಂಟೆಯಿಂದ ಹಳೆಯ ತಹಶೀಲ್ದಾರರ ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.
ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಅಮೆಜಾನ್ ಲಿಮಿಟೆಡ್ ಹಾಗು ವಿಸ್ಟ್ರಾನ್ ಇನ್ಪೋಕಂ ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ ಡಿಪ್ಲೋಮಾ ಮತ್ತು ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ ವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಜಿಲ್ಲೆಯ ನಿರುದ್ಯೋಗಿ ಯುವಕರು ಉದ್ಯೋಗ ಮೇಳವನ್ನು ಸದುಪಯೋಗ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ:08392-273988, 08392-294230 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.