ಹೊಳಲ್ಕೆರೆ : ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಹಾಗೂ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯಂತೆ ಪುರಸಭೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಹೊಳಲ್ಕೆರೆ ಪಟ್ಟಣದಲ್ಲಿರುವ ಮೂರ್ತಿ ತಯಾರಕರಿಗೆ ಮತ್ತು ಹೊಳಲ್ಕೆರೆ ಪಟ್ಟಣದ ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಸ್ವಚ್ಚ, ಸುಂದರ, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಹಾಗೂ ಸರ್ಕಾರದಿಂದ ಹಾಗೂ ಪುರಸಭೆ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಯಿತು.
- ಪಿ.ಓ.ಪಿ ಮತ್ತು ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ಪ್ರತಿಷ್ಠಾಪನೆಯನ್ನು ಸಂಪೂರ್ಣ ಸ್ಥಗಿತಗೊಳಿಸುವುದು
- ಗಣಪತಿ ಮೂರ್ತಿ ಪ್ರತಿಷ್ಠಾಪನೆಗು ಮುನ್ನ ಪುರಸಭೆ, ಪೋಲೀಸ್ ಇಲಾಖೆ, ಬೆಸ್ಕಾಂ ಹಾಗೂ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿಪಡೆಯುವುದು
- ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪುರಸಭೆ ವಾಹನಕ್ಕೆ ನೀಡಿ ಸ್ವಚ್ಚತೆಯನ್ನು ಕಾಪಾಡುವುದು
- ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು
- ಸಾರ್ವಜನಿಕ ಹಾಗೂ ವಾಹನ ಸಂಚಾರಕ್ಕೆ ಅಡೆತಡೆಯಾಗದಂತೆ ನೋಡಿಕೊಳ್ಳುವುದು
- ಪುರಸಭೆಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಮಾತ್ರ ಗಣಪತಿ ವಿಸರ್ಜನೆ ಮಾಡುವುದು
- ಪ್ರತಿಷ್ಠಾಪನೆ ಜಾಗದಲ್ಲಿ ಪ್ರಸಾದ ಮತ್ತು ಆಹಾರ ಸರಬರಾಜು ಮಾಡುವ ಮುಂಚೆ ಎಫ್.ಎಸ್.ಎಸ್.ಎ.ಐ ಇಲಾಖೆಯಿಂದ ಅನುಮತಿ ಪಡೆಯುವುದು
- ಮೇಲ್ಕಂಡ ಸೂಚನೆಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ದಂಡ ವಿಧಿಸುವುದಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು
ಈ ಸಮಯದಲ್ಲಿ ಮುಖ್ಯಾಧಿಕಾರಿ ರಾಧ.ಆರ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳಾದ ಶೌಕತ್, ಪ್ರಶಾಂತ್.ಹೆಚ್, ಪೌರಕಾರ್ಮಿಕರು ಹಾಗೂ ಸಿಬ್ಬಂದಿಗ ವರ್ಗ ಹಾಜರಿದ್ದರು.
ವರದಿ : ನಾಗರಾಜ್ ಕೆ ಹೊಳಲ್ಕೆರೆ