9.7 C
New York
Friday, October 18, 2024

ನವಜೀವನ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ

ಚಿಕ್ಕಜಾಜೂರು : ಚಿಕ್ಕಜಾಜೂರು ಯೋಜನಾ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮರಣೆ ಹಾಗೂ ನವಜೀವನ ಸದಸ್ಯರ ಅಭಿನಂದನ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಶ್ರೀ ಕೆಂಗುಂಟೆ ಜಯಣ್ಣ ನೆರವೇರಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶ ದಲ್ಲಿ ಜನರ ಸರ್ವಾoಗಿಣ ಅಭಿವೃದ್ಧಿಗೆ ಪೂರಕ ಕೆಲಸ ಮಾಡುತ್ತಿದ್ದು ಇದರಿಂದ ಕುಟುಂಬ ಅಭಿವೃದ್ಧಿ ಆಗುತ್ತಿದೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ DSS ತಾಲೂಕು ಸಂಚಾಲಕರು ಸುಂದರಮೂರ್ತಿ ರವರು ಭಾಗವಹಿಸಿ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲಾರೂ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು..
ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ ರವರು ಮಾತನಾಡಿ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿಗಳ ಹಾಗೂ ಪೂಜ್ಯ ವೀರೇಂದ್ರ ಹೆಗ್ಗಡೆ ಯವರು ಅವಿನಾಭಾವ ಸಂಬಂಧ ಹಿಂದಿನಿಂದ ಇದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಸಾಮಾಜಿಕ ವಾಗಿ, ಆರ್ಥಿಕವಾಗಿ ಬಹಳ ದೊಡ್ಡ ಕ್ರಾಂತಿ ಆಗುತ್ತಿದ್ದು, ಗ್ರಾಮಾಭಿವೃದ್ಧಿ ಯೋಜನೆ ಯಿಂದ ನಮ್ಮ ರೈತರಿಗೆ ಸಾಕಷ್ಟು ಅನುಕೂಲ ಆಗಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ಅವರು ಮಾತನಾಡಿ , ಒಮ್ಮೆ ದುಶ್ಚಟ ದಿಂದ ಮುಕ್ತಿ ಹೊಂದಿದ ನವಜೀವನ ಸದಸ್ಯರು ಮತ್ತೊಮ್ಮೆ ದುಶ್ಚಟಕ್ಕೆ ಬಲಿ ಆಗದಂತೆ ಮಾಹಿತಿ ನೀಡಿದರು. ನವರಾತ್ರಿ ಹಬ್ಬ ನಡೆಯುತ್ತಿದ್ದು ದೇವಿಯ ಆಶೀರ್ವಾದ ಎಲ್ಲ ನವಜೀವನ ಸದಸ್ಯರ ಕುಟುಂಬದವರ ಮೇಲೆ ಇರಲಿ ಎಂದು ಹಾರೈಸಿದರು.
ಜನಜಾಗ್ರತಿ ವೇದಿಕೆ ಯೋಜನಾಧಿಕಾರಿಗಳು ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗ್ರತಿ ವೇದಿಕೆಯ ಸದಸ್ಯರಾದ ಮಾರುತೇಶ್, ರಮೇಶ್ ಗೌಡ್ರು, ಪ್ರೇಮಕಲಾ, ಸರಸ್ವತಿ, ಭಾಗವಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದ್ಯವರ್ಜನ ಶಿಬಿರದ ಅಧ್ಯಕ್ಷರು ಬಿ ಎಸ್ ರಮೇಶ್ ರವರು ವಹಿಸಿಕೊಂಡು ನವಜೀವನ ಸದಸ್ಯರಿಗೆ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು. ತಾಲೂಕು ಯೋಜನಾಧಿಕಾರಿಗಳಾದ ವಸಂತ. ಎಸ್ ರವರು ಕಾರ್ಯಕ್ರಮಕ್ಕೆ ಸ್ವಾಗತ ಬಯಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ರಂಜಿತಾ ನಿರೂಪಿಸಿ, ವಲಯದ ಮೇಲ್ವಿಚಾರಕರಾದ ಬಸವರಾಜ್ ವಂದಿಸಿದರು. ಕಾರ್ಯಕ್ರಮದಲ್ಲಿ ನವಜೀವನ ಸದಸ್ಯರು, ಸೇವಾ ಪ್ರತಿನಿಧಿಗಳು, ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles